ಯಾದಗಿರಿ : ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದು, ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಲುಷಿತ ನೀರು ಸೇವನೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.