ಚಿತ್ರದುರ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.
ಬೆಳಗ್ಗಿನ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವನೆ ಮಾಡಿದ್ದರು. ಬಳಿಕ ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಬಳಿಕ ವಾಂತಿ-ಬೇಧಿ ಆರಂಭವಾಗಿದ್ದು, ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ.
ಸದ್ಯ ಹೊಳಲ್ಕೆರೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.