alex Certify ಚಿಕ್ಕಬಳ್ಳಾಪುರ : ಹಾಸ್ಟೆಲ್ ನಲ್ಲಿ ಉಪಹಾರ ಸೇವಿಸಿದ್ದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ವಸ್ಥ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಬಳ್ಳಾಪುರ : ಹಾಸ್ಟೆಲ್ ನಲ್ಲಿ ಉಪಹಾರ ಸೇವಿಸಿದ್ದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ : ಉಪಹಾರ ಸೇವಿಸಿದ್ದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ವಸ್ಥಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆ.ರಾ ಗುಟ್ಟಹಳ್ಳಿ ಬಾಲಕರ ಹಾಸ್ಟೆಲ್ ನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಹಾಸ್ಟೆಲ್ ನಲ್ಲಿ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಡ್ಲಿ, ಸಾಂಬಾರ್ ಸೇವಿಸಿದ್ದರು. ಬಳಿಕ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಕೆಲವರನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಲವು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸೂಕ್ತ  ಕಾರಣ ತಿಳಿದು ಬಂದಿಲ್ಲ, ತಿಂಡಿ ತಿಂದ ಕೆಲವೇ ಕ್ಷಣಗಳಲ್ಲಿ ಮಕ್ಕಳಿಗೆ ವಾಂತಿ, ಸುಸ್ತು ಕಾಣಿಸಿಕೊಂಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...