ಬೆಂಗಳೂರು : ರಾಜ್ಯದಲ್ಲಿ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು ‘ಆಯುಷ್ಮಾನ್’ ಯೋಜನೆಯಡಿ ನೋಂದಣಿ ಮಾಡಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ 3450ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು ‘ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ’ ಯೋಜನೆಯಡಿ ಸೇವೆ ನೀಡಲು ನೋಂದಾಯಿಸಿಕೊಂಡಿದ್ದಾರೆ. ಸುಮಾರು 1650 ಚಿಕಿತ್ಸಾ ಪ್ಯಾಕೇಜ್ಗಳು ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆ ಮತ್ತು 540 ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. 171 ಅತ್ಯಂತ ತುರ್ತು ಚಿಕಿತ್ಸೆ ಮತ್ತು ಜೀವ ಉಳಿಸುವ ಪ್ಯಾಕೇಜ್ಗಳನ್ನು ಇದು ಒಳಗೊಂಡಿದೆ ಎಂದಿದ್ದಾರೆ.
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ ಒಟ್ಟು ಅನುದಾನದಲ್ಲಿ ರಾಜ್ಯ ಸರ್ಕಾರ ಶೇ.66 ಹಾಗೂ ಕೇಂದ್ರ ಸರ್ಕಾರ ಶೇ.34 ಪಾಲು ನೀಡುತ್ತಿವೆ.
ಆರೋಗ್ಯವಂತ ಜನತೆ, ಸದೃಢ ಸಮಾಜ ನಿರ್ಮಾಣ ನಮ್ಮ ಧ್ಯೇಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.