ಯಾದಗಿರಿ: ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿ ಜಿಲ್ಲೆ ಶಹಪುರ ತಾಲೂಕಿನ ಧೋರನಹಳ್ಳಿಯಲ್ಲಿ ನಡೆದಿದೆ.
ಧೋರನಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ, ಮಹಾಂತೇಶ್ವರ ಪ್ರಾಥಮಿಕ ಶಾಲೆ, ಅಂಬೇಡ್ಕರ್ ಶಾಲೆಯಲ್ಲಿ ಘಟನೆ ನಡೆದಿದೆ. ಖಾಸಗಿ ಏಜೆನ್ಸಿ ವತಿಯಿಂದ ಸರಬರಾಜು ಮಾಡಿದ ಆಹಾರವನ್ನು ಮಕ್ಕಳು ಸೇವಿಸಿದ್ದರು. ನಾಲ್ಕು ಶಾಲೆಗಳ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಾಗಿದ್ದು, ಅಸ್ವಸ್ಥಗೊಂಡ ಮಕ್ಕಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.