
ಮಂಡ್ಯ: ಪ್ರಸಾದ ಸೇವಿಸಿದ ಬಳಿಕ ಒಂದು ಗ್ರಾಮದ 50ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿಯಾದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ.
ಗ್ರಾಮದಲ್ಲಿ ಚನ್ನಬಸವೇಶ್ವರ ಹಬ್ಬ ಹಿನ್ನೆಲೆಯಲ್ಲಿ ಪ್ರಸಾದ ವಿತರಿಸಲಾಗಿತ್ತು. ಈ ಪ್ರಸಾದವನ್ನು ಸೇವಿಸಿದ್ದ ಗ್ರಾಮದ 50 ಕ್ಕೂ ಹೆಚ್ಚು ಜನರಿಗೆ ನಿನ್ನೆ, ಇಂದು ವಾಂತಿ ಭೇದಿಯಾಗಿದೆ. ಅಸ್ವಸ್ಥರಾದವರನ್ನು ಪಾಂಡವಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.