ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಕಾಲೇಜಿನ 58 ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ ಪ್ರಿನ್ಸಿಪಾಲ್ ಆದೇಶ ಹೊರಡಿಸಿದ್ದಾರೆ.
ಶಿರಾಳಕೊಪ್ಪ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ನಿನ್ನೆ ಪ್ರತಿಭಟನೆ ನಡೆಸಿದ್ದರು. ಹಿಜಾಬ್ ಧರಿಸಿ ತರಗತಿಗೆ ಹೋಗಲು ಅವಕಾಶ ನೀಡುವಂತೆ ಒತ್ತಾಯಿಸಿದ್ದರು. ಆದರೆ ಶಾಲಾ ಸಿಬ್ಬಂದಿಗಳು ಕೋರ್ಟ್ ಮಧ್ಯಂತರ ಆದೇಶದ ಪ್ರಕಾರ ಯಾವುದೇ ಧಾರ್ಮಿಕ ಗುರುತು ಧರಿಸಿ ಬರಲು ಅವಕಾಶವಿಲ್ಲ ಎಂದು ಮನವೊಲಿಕೆ ಮಾಡಲು ಯತ್ನಿಸಿದ್ದಾರೆ. ಆದರೂ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡುವುದಾಗಿ ಎಚ್ಚರಿಸಿದ್ದರು.
ವೈನ್ ಆರೋಗ್ಯಕ್ಕೆ ಒಳ್ಳೆಯದೇ…? ಇಲ್ಲಿದೆ ಒಂದಷ್ಟು ಉಪಯುಕ್ತ ಮಾಹಿತಿ
ಇದೀಗ ಇಂದೂ ಕೂಡ ವಿದ್ಯಾರ್ಥಿನಿಯರು ಕಾಲೇಜು ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ 58 ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.