ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿಯ ಔಷಧಿ ಅಂಗಡಿ ಮಾಲೀಕನೊಬ್ಬನ ಮೊಬೈಲ್ ನಲ್ಲಿ 60ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆಯಾಗಿವೆ.
ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ಅಮ್ಜದ್ ಎಂಬುವನನ್ನು ಸುಮೊಟೋ ಕೇಸ್ ದಾಖಲಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ. ಚನ್ನಗಿರಿಯ ಮೇಲಿನ ಬಸ್ ನಿಲ್ದಾಣದಲ್ಲಿ ಮೆಡಿಕಲ್ ಶಾಪ್ ಹೊಂದಿರುವ ಆರೋಪಿ ಅನೇಕ ಯುವತಿಯರು, ಮಹಿಳೆಯರು, ಅಪ್ರಾಪ್ತರನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಿಡಿಯೋ ಮಾಡಿಕೊಳ್ಳುತ್ತಿದ್ದ. ಅವುಗಳನ್ನು ಮೊಬೈಲ್, ಕಂಪ್ಯೂಟರ್ ಸಿಸ್ಟಮ್ ನಲ್ಲಿ ಹಾಕಿಕೊಂಡು ನೋಡುತ್ತಿದ್ದ. ಇಂತಹ 60ಕ್ಕೂ ಅಧಿಕ ದೃಶ್ಯಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.
ಅಲ್ಲದೆ, ಮಹಿಳೆಯರು, ಯುವತಿಯರು ಅಪ್ರಾಪ್ತೆಯರು, ಬಸ್ ನಲ್ಲಿ ಪ್ರಯಾಣಿಸುವಾಗ ದೇಹದ ಭಾಗಗಳನ್ನು ಕದ್ದು ಮುಚ್ಚಿ ಸೆರೆಹಿಡಿಯುತ್ತಿದ್ದ. 30ಕ್ಕೂ ಅಧಿಕ ಮಹಿಳೆಯರನ್ನು ಆರೋಪಿ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದೆ.
ಜಾಲತಾಣದಲ್ಲಿ ಕೆಲ ವಿಡಿಯೋಗಳು ಹರಿದಾಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಹೆಣ್ಣು ಮಕ್ಕಳ ಗೌರವ ಘನತೆಗೆ ತಕ್ಕಂತೆ ಯಾವುದೇ ವಿಡಿಯೋ, ಫೋಟೋ ಶೇರ್ ಮಾಡದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದು, ಅಂತಹ ವಿಡಿಯೋ, ಫೋಟೋ ಶೇರ್, ಸೇವ್ ಮಾಡಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.