ಚಿತ್ರದುರ್ಗ: ಕ್ಲೊರಿನ್ ಗ್ಯಾಸ್ ಸೋರಿಕೆಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಎಪಿಎಂಸಿ ಸಮೀಪ ನಡೆದಿದೆ.
ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಸಿರಾಟ ತೊಂದರೆಯಿಂದ ಅಸ್ವಸ್ಥರು ಬಳಲುತ್ತಿದ್ದಾರೆ. ಅಸ್ವಸ್ಥರಿಗೆ ಆಕ್ಸಿಜನ್ ಪೂರೈಸಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.