ಬೆಳಗಾವಿ :: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯೆ ಡಾ.ತೇಜಸ್ವಿನಿ ಗೌಡ ಅವರು, ಆನೆ ಹಾವಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು ಅನೆ ಕಂದಕ ನಿರ್ಮಾಣ, ರೇಲ್ವೇ ಬ್ಯಾರಿಕೇಡ್‌ಗಳ ಅಳವಡಿಕೆಯನ್ನು ಮಾಡಲಾಗುವುದು ಎಂದು ತಿಳಿಸಿದ್ದಾರೆ.