alex Certify ಮಸೀದಿಯೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಸೀದಿಯೊಳಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಅರೆಸ್ಟ್

ಮಂಗಳೂರು: ರಾತ್ರಿ ವೇಳೆ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಓರ್ವನನ್ನು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.

ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಮತ್ತೊಬ್ಬ ಆರೋಪಿ ಕೈಕೊಂಬ ನಡ್ತೋಟದ ಸಚಿನ್ ಪರಾರಿಯಾಗಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಕಡಬ ಪೊಲೀಸ್ ಠಾಣೆ ವ್ಯಾಪ್ತಿಯ ಮರ್ದಾಳ ಬದ್ರಿಯಾ ಜುಮಾ ಮಸೀದಿ ಕಾಂಪೌಂಡ್ ಒಳಗೆ ಸೋಮವಾರ ರಾತ್ರಿ 11 ಗಂಟೆಗೆ ಬೈಕ್ ನಲ್ಲಿ ಬಂದಿದ್ದ ಇವರು ಮಸೀದಿ ಆವರಣದಲ್ಲಿ ಜೈ ಶ್ರೀ ರಾಮ್ ಘೋಷಣೆ ಕೂಗಿದ್ದಾರೆ. ನಂತರ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಪರಿಶೀಲಿಸಿದ್ದು, ತನಿಖೆ ನಡೆಸಿ ಆರೋಪಿಗಳಲ್ಲಿ ಓರ್ವನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...