alex Certify ಮುಸ್ಲಿಂ ಮುಖಂಡರ ಸಭೆಯಲ್ಲಿ ಮಹತ್ವದ ನಿರ್ಧಾರ: ಬೆಳಗಿನ ಆಜಾನ್ ಗೆ ಮೈಕ್ ಬಳಸದಿರಲು ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಸ್ಲಿಂ ಮುಖಂಡರ ಸಭೆಯಲ್ಲಿ ಮಹತ್ವದ ನಿರ್ಧಾರ: ಬೆಳಗಿನ ಆಜಾನ್ ಗೆ ಮೈಕ್ ಬಳಸದಿರಲು ತೀರ್ಮಾನ

ಬೆಂಗಳೂರು: ಬೆಳಗಿನ ಜಾವ ಆಜಾನ್ ಗೆ ಲೌಡ್ ಸ್ಪೀಕರ್ ಬಳಸದಿರಲು ಮುಸ್ಲಿಂ ಮುಖಂಡರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನಡೆದ ವಿವಿಧ ಮಸೀದಿಗಳ ಮುಖ್ಯಸ್ಥರು ಜನಪ್ರತಿನಿಧಿಗಳ ಸಭೆಯಲ್ಲಿ ಬೆಳಗಿನ 5 ಗಂಟೆ ಮೈಕ್ ನಲ್ಲಿ ಆಜಾನ್ ಕೂಗದಿರಲು ನಿರ್ಧರಿಸಿದೆ.

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕ ಬಳಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶ ಮತ್ತು ಸರ್ಕಾರದ ಮಾರ್ಗಸೂಚಿಗಳನ್ನು ಎಲ್ಲ ಮಸೀದಿಗಳು ಪಾಲಿಸಬೇಕು. ಬೆಳಗಿನ 5 ಗಂಟೆಗೆ ಯಾವುದೇ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಸಬಾರದು ಎಂದು ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲಾ ಮಸೀದಿಗಳಿಗೂ ಈ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

ಈ ಮೂಲಕ ಧರ್ಮ ಸಂಘರ್ಷಕ್ಕೆ ಕಾರಣವಾಗಿದ್ದ ಲೌಡ್ ಸ್ಪೀಕರ್ ಬಳಕೆ ವಿವಾದಕ್ಕೆ ಅಂತ್ಯ ಹಾಡಲು ಮುಸ್ಲಿಂ ಧರ್ಮಗುರುಗಳು, ಜನಪ್ರತಿನಿಧಿಗಳು ಮುಂದಾಗಿದ್ದು, ಬೆಳಗಿನ 5 ಗಂಟೆ ಆಜಾನ್ ಗೆ ಮೈಕ್ ಬಳಸುವುದಿಲ್ಲ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...