alex Certify ಸೊಳ್ಳೆ ನಾಶಕ ಲಿಕ್ವಿಡ್ ಕುಡಿದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೊಳ್ಳೆ ನಾಶಕ ಲಿಕ್ವಿಡ್ ಕುಡಿದು ಮಗು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾವೂರು ಗ್ರಾಮದಲ್ಲಿ ಮಾಸ್ಕಿಟೋ ಲಿಕ್ವಿಡ್ ಕುಡಿದು ಎರಡು ವರ್ಷದ ಮಗು ಮೃತಪಟ್ಟ ಘಟನೆ ನಡೆದಿದೆ.

ಆರವ ಮಹೇಶ್ ನಾಯ್ಕ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಬುಧವಾರ ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೈಗೆ ಸೊಳ್ಳೆ ನಾಶಕ ದ್ರಾವಣ ಮಾಸ್ಕಿಟೋ ಲಿಕ್ವಿಡ್ ಸಿಕ್ಕಿದೆ. ಇದನ್ನು ಮಗು ಚೀಪಿದ ನಂತರ ಅಸ್ವಸ್ಥಗೊಂಡಿದ್ದು, ಕೂಡಲೇ ಹೊನ್ನಾವರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...