ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.
ನಯನಾ ಅವರಿಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಮುಖಂಡರು ಮತ್ತೆ ಸಭೆ ನಡೆಸಿದ್ದಾರೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದ ವಸ್ತಾರೆಯಲ್ಲಿ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಗ್ರಾಮ ಸದಸ್ಯರು ಸೇರಿದಂತೆ ಹಲವರು ಭಾಗಿಯಾಗಿದ್ದು, ನಯನಾ ಅವರಿಗೆ ಟಿಕೆಟ್ ನೀಡದಂತೆ ಕೆಪಿಸಿಸಿಗೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಕಳೆದ ವಾರವೂ ನಯನಾ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಸಭೆ ನಡೆಸಿದ್ದರು ಎನ್ನಲಾಗಿದೆ.