ಬೆಂಗಳೂರು: ತಾಯಿ ಹಾಗೂ ನವಜಾತ ಶಿಶುಗಳ ಆರೋಗ್ಯ ಕಾಳಜಿಗಾಗಿ ಆರೋಗ್ಯ ಇಲಾಖೆ ರಾಜ್ಯದ ಮಾಹಿತಿ ಮತ್ತು ತಂತ್ರಜ್ಞಾನ ಕಂಪನಿ ಇನ್ಫೋಸಿಸ್ ಜೊತೆ ಒಪ್ಪಂದ ಮಾಡಿಕೊಂಡಿದೆ.
ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಸಿ-ಕ್ಯಾಂಪ್ ಮತ್ತು ಆರೋಗ್ಯ ಇಲಾಖೆ ಒಪ್ಪಂದ ಮಾಡಿಕೊಂಡಿದ್ದು, ತಾಯಿ ಹಾಗೂ ನವಜಾತ ಶಿಶುಗಳ ಆರೋಗ್ಯದ ಕಾಳಜಿ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನ ಬಳಸಿ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಮಗುವಿನ ಹೃದಯ ಬಡಿತದ ಬಗ್ಗೆ, ಗರ್ಭದಲ್ಲಿರುವ ಶಿಶುವಿನ ಹೃದಯ ಬಡಿತದ ಬಗ್ಗೆ ತಂತ್ರಜ್ಞಾನ ಮಾಹಿತಿ ನೀಡಲಿದೆ. ಪ್ರಾಯೋಗಿಕವಾಗಿ 2 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಮುಂದಿನ ದಿನಗಳಲ್ಲಿ 8 ಜಿಲ್ಲೆಗಳಲ್ಲಿ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.