
ಚಿತ್ರದುರ್ಗ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ.
ತಾಯಿ ಗೀತಾ (45) ಹಾಗೂ ಮಗಳು ಲಾವಣ್ಯ (17) ಮೃತ ದುರ್ದೈವಿಗಳು. ವಾರದ ಹಿಂದೆಯೇ ತಾಯಿ ಹಾಗೂ ಮಗಳು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ನೇಣುಬಿಗಿದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ.
ಪತಿ ಸಾವಿನ ಬಳಿಕ ಗೀತಾ ತೀವ್ರ ಖಿನ್ನತೆಗೆ ಒಳಗಾಗಿದ್ದರು. 6 ತಿಂಗಳ ಹಿಂದೆಯೇ ಗೀತಾ ಪತಿ ಬಸವರಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿ ಸಾವಿನಿಂದ ತಾಯಿ ಮಗಳು ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣಕ್ಕೆ ಮನನೊಂದು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.