alex Certify ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಮಂಡ್ಯ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅನಾರೋಗ್ಯದಿಂದ ಸೊಸೆ ಸುಶೀಲಾ (42) ಎಂಬುವವರು ನಿನ್ನೆ ಸಂಜೆ ಮೃತಪಟ್ಟಿದ್ದರು. ಸೊಸೆಯ ಸಾವಿನ ಸುದ್ದಿ ಕೇಳಿದ ಅತ್ತೆ ಹುಚ್ಚಮ್ಮ(75) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಹುಚ್ಚಮ್ಮನಿಗೆ ಐವರು ಗಂಡು ಮಕ್ಕಳಿದ್ದು. ಅದರಲ್ಲಿ 2 ನೇ ಮಗನ ಪತ್ನಿ ಸುಶೀಲಾ ಜೊತೆ ಹುಚ್ಚಮ್ಮ ಉತ್ತಮ ಭಾಂಧವ್ಯ ಇಟ್ಟುಕೊಂಡಿದ್ದರು. ಅತ್ತೆ ಸೊಸೆ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ.

ಸಾಂದರ್ಭಿಕ ಚಿತ್ರ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...