
ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ.
ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ ಬಾಲಕನ ಶವ ಪತ್ತೆಯಾಗಿದೆ. ತಾಯಿ-ಮಗ ಇಬ್ಬರೂ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದರು. ತುರುವೆಕೆರೆ ಠಾಣೆಯಲ್ಲಿ ನಾಪತ್ತೆ ಕೇಸ್ ದಾಖಲಾಗಿತ್ತು.
ಇದೀಗ ತಾಯಿ-ಮಗನ ಶವ ತುರುವೆಕೆರೆಯಲ್ಲಿ ಪತ್ತೆಯಾಗಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.