
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲುಸಾಲೆಯಲ್ಲಿ ತಾಯಿ ಅಂತ್ಯಕ್ರಿಯೆ ಮಾಡಿ ಮನೆಗೆ ಬಂದ ಮಗ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ತಿಮ್ಮಪ್ಪ ಗೌಡ(58) ಮೃತಪಟ್ಟವರು. ಅವರ ತಾಯಿ ಚಿನ್ನಮ್ಮ(78) ನಿಧನರಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮಾಡಿ ಮನೆಗೆ ಮರಳಿದ್ದಾರೆ. ಮನೆಗೆ ಬಂದ ಅರ್ಧ ಗಂಟೆಯೊಳಗೆ ಅವರಿಗೆ ತೀವ್ರ ಹೃದಯಘಾತವಾಗಿ ಮೃತಪಟ್ಟಿದ್ದಾರೆ. ತಿಮ್ಮಪ್ಪ ಗೌಡ ಅವರಿಗೆ ಪತ್ನಿ, ಪುತ್ರ ಇದ್ದಾರೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬ ಸದಸ್ಯರು, ಬಂಧುಗಳು ಕಣ್ಣೀರಿಟ್ಟಿದ್ದಾರೆ.