ಆಂಧ್ರಪ್ರದೇಶದ ನರಸಾಪುರಂನಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ, ಸ್ಕಾರ್ಪಿಯೋ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಲವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಚಾಲಕ ಹಾಗೂ ಆತನ ಮಗ, ತಾಯಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಆ ಮೂವರು ಬದುಕುಳಿದಿದ್ದಾರೆ. ಆದ್ರೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ವರದಿ ಪ್ರಕಾರ, ಸೀತಾರಾಮಪುರದಿಂದ ನರಸಾಪುರಕ್ಕೆ ಬರುತ್ತಿದ್ದ ಕಾರು ಆಂಜನೇಯಸ್ವಾಮಿ ದೇವಸ್ಥಾನದ ಬಳಿ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.
ಮಂಗಳಗುಂಟಪಾಲೇನಿಯ ಗೋರಿಂಕಲ ವಲಿವರ್ ಎಂಬುವರು ತಮ್ಮ ಹಿರಿಯ ಚಿಕ್ಕಮ್ಮ ಮೇಕಲ ಮೇರಿಬಾಯಿ (58) ಅವರನ್ನು ದ್ವಿಚಕ್ರ ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮೇರಿಬಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ವಲಿವರ್‌ಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಆರು ದ್ವಿಚಕ್ರ ವಾಹನ ಜಖಂಗೊಂಡಿವೆ.