ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿಯ ಕೆರೆಯಲ್ಲಿ ನಡೆದಿದೆ.
ಕವಿತಾ ಬಸಂತ್ ಜುನೆ (40) ಹಾಗೂ ಮಗ ಸಮರ್ಥ ಜುನೆ (14) ಮೃತರು. ಕವಿತಾ ಕಲಕಾಂಬ ಗ್ರಾಮದ ನಿವಾಸಿ. ಪತಿ ಹಾಗೂ ಅತ್ತೆಯ ಕಾಟಕ್ಕೆ ಮನನೊಂದು ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮಹಿಳೆ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪತಿ ಹಾಗೂ ಅತ್ತೆ ಕಾಟದಿದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.