alex Certify ತಾಯಿ ಹಾಗೂ ಮೂರು ವರ್ಷದ ಮಗು ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ ಹಾಗೂ ಮೂರು ವರ್ಷದ ಮಗು ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ…!

ಚಿಕ್ಕಬಳ್ಳಾಪುರ: ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುದಗೂರು ಗ್ರಾಮದಲ್ಲಿ ನಡೆದಿದೆ.

25 ವರ್ಷದ ಸುಧಾಮಣಿ ಹಾಗೂ ಮೂರು ವರ್ಷದ ಮಗು ಚಾರ್ವಿ ಮೃತರು. ಮಗುವಿನ ಶವ ಮನೆಯಲ್ಲಿ ಪತ್ತೆಯಾಗಿದ್ದರೆ, ತಾಯಿ ಸುಧಾಮಣಿ ಮೃತದೇಹ ಮನೆಯ ಬಳಿಯ ಬಾವಿಯಲ್ಲಿ ಪತ್ತೆಯಾಗಿದೆ.

ಕೌಟುಂಬಿಕ ಕಲಹಕ್ಕೆ ಸುಧಾಮಣಿ ತನ್ನ ಮಗಳನ್ನು ಕತ್ತು ಹಿಸುಕಿ ಕೊಂದು ಬಳಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿಯ ಮನೆಯವರು ಆರೋಪಿಸಿದ್ದಾರೆ. ಆದರೆ ಸುಧಾಮಣಿ ಪೋಷಕರು, ಪತಿ ಹಾಗೂ ಮನೆಯವರೇ ಮಗು ಹಾಗೂ ತಾಯಿಯನ್ನು ಕೊಂದಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

5 ವರ್ಷಗಳ ಹಿಂದೆ ರವಿ ಹಾಗೂ ಸುಧಾಮಣಿ ವಿವಾಹವಾಗಿದ್ದರು. ದಂಪತಿಗೆ ಒಂದು ಗಂಡು ಮಗು ಹಾಗೂ 3 ವರ್ಷದ ಹೆಣ್ಣು ಮಗುವಿತ್ತು. ಆದರೆ ಈಗ ತಾಯಿ ಹಾಗೂ ಹೆಣ್ಣು ಮಗು ಇಬ್ಬರು ಶವವಾಗಿ ಪತ್ತೆಯಾಗಿದ್ದು, ತಾಯಿ ಮಗುವಿನ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...