ನಟ ಹಾಗೂ ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಮೋಷನ್ ಪೋಸ್ಟರ್ ಅನ್ನು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಪ್ಪ – ಮಗನ ಬಾಂಧವ್ಯದ ಕುರಿತ ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ತಂದೆಯ ಪಾತ್ರದಲ್ಲಿ ಪ್ರಕಾಶ್ ರಾಜ್ ಅಭಿನಯಿಸುತ್ತಿದ್ದಾರೆ.
ರಾಜ ಮೋಹನ್ ನಿರ್ದೇಶನದ ಈ ಚಿತ್ರವನ್ನು RC ಸ್ಟುಡಿಯೋಸ್ ಬ್ಯಾನರ್ ನಲ್ಲಿ ಆರ್ ಸಿ ಚಂದ್ರು ನಿರ್ಮಾಣ ಮಾಡುತ್ತಿದ್ದು, ನಕುಲ್ ಅಭ್ಯಂಕರ್ ಸಂಗೀತ ಸಂಯೋಜನೆ ನೀಡುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ಜೋಡಿಯಾಗಿ ಅಮೃತ ಅಯ್ಯಂಗಾರ್ ಅಭಿನಯಿಸಿದ್ದು, ರಘುನಾಥ ಎಲ್ ಸಂಕಲನ, ಶಿವಕುಮಾರ್ ಜೆ ಕಲಾ ನಿರ್ದೇಶನ, ಮಂಜು ಮಾಂಡವ್ಯ ಸಂಭಾಷಣೆ, ನಾರಾಯಣ ವೇಷಭೂಷಣ, ವಿನೋದ್ ಸಾಹಸ ನಿರ್ದೇಶನ, ಸುಗ್ನನ್ ಮೂರ್ತಿ ಛಾಯಾಗ್ರಹಣ ಹಾಗೂ ಧನು ಕುಮಾರ್ ನೃತ್ಯ ನಿರ್ದೇಶನವಿದೆ.