ಬೆಂಗಳೂರು : ವಾಹನ ಸವಾರರೇ… ನಿಮ್ಮ ಗಾಡಿಗೆ ಇನ್ಮುಂದೆ ಕಣ್ಣು ಕುಕ್ಕುವ ಲೈಟ್ ಅಳವಡಿಸಿದ್ರೆ ಕೇಸ್ ಬೀಳೋದಂತು ಗ್ಯಾರಂಟಿ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ.
ಹೌದು, ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ.
ಕೇಂದ್ರ ಮೋಟಾರು ಕಾಯ್ದೆ (ಸಿಎಂವಿ) ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.