ಬೆಂಗಳೂರು : ವಾಹನಗಳಲ್ಲಿ ಪ್ರಖರ ಬೆಳಕಿನ ಹೆಡ್ಲೈಟ್ಗಳನ್ನು ಅಳವಡಿಸುವುದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಣ್ಣುಕುಕ್ಕುವ ಹೆಡ್ಲೈಟ್ಗಳನ್ನು ವಾಹನಗಳಿಗೆ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ.