ಬೆಂಗಳೂರು : ವಾಹನ ಸವಾರರೇ ಎಚ್ಚರ…. ಡೂಪ್ಲಿಕೇಟ್ ವೆಬ್ ಸೈಟ್ ನಲ್ಲಿ HSRP ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಅನೇಕಲ್ ನ ಸರ್ಜಾಪುರದಲ್ಲಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಯಾವುದೇ ಗೊಂದಲ ಇಲ್ಲ, ಸದ್ಯ ನಂಬರ್ ಪ್ಲೇಟ್ ಅಳವಡಿಸಲು 3 ತಿಂಗಳು ಕಾಲಾವಕಾಶ ನೀಡಲಾಗಿದೆ. ಸರ್ಕಾರ ಸೂಚಿಸಿದ ವೆಬ್ ಸೈಟ್ ನಲ್ಲಿಯೇ ನೊಂದಣಿ ಮಾಡಿಕೊಳ್ಳಬೇಕು, ಡೂಪ್ಲಿಕೇಟ್ ವೆಬ್ ಸೈಟ್ ನಲ್ಲಿ ನಂಬರ್ ಪ್ಲೇಟ್ ಹಾಕಿಸಿದ್ರೆ ಕ್ರಿಮಿನಲ್ ಕೇಸ್ ಹಾಕಿಸಿ ಜೈಲಿಗೆ ಕಳುಹಿಸುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನ್ಲೈನ್ ಮೂಲಕ ನೋಂದಣಿ ಮಾಡಿಸಬೇಕಾಗಿದ್ದು, ಈ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಉಂಟಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ.
ವಾಹನ ಮಾಲೀಕರು ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಸಹಾಯವಾಣಿ ಸಂಖ್ಯೆ 9449863429/26 ಸಂಖ್ಯೆಗೆ ಕರೆ ಮಾಡಬಹುದು. https://transport.karnataka.gov.in/?utm_source=DH-MoreFromPub&utm_medium=DH-app&utm_campaign=DH ವೆಬ್ ಸೈಟ್ ಅಥವ www.siam.in ಗೆ ಭೇಟಿ ನೀಡಿ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಫೆ. 17ರ ವರೆಗೆ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿತ್ತು. ಇನ್ನೂ ಭಾರಿ ಸಂಖ್ಯೆಯ ವಾಹನಗಳು ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಿನ್ನಲೆಯಲ್ಲಿ ಗಡುವು ವಿಸ್ತರಿಸಲಾಗಿದೆ. ಸಾರಿಗೆ ಇಲಾಖೆ 31 ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಿದ್ದು, . ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.