ಬೆಂಗಳೂರು : ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ.
ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.
ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.
ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅವಳಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು. ನಂತರ ಮೇ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ಜೂ.12 ರವರೆಗೆ ಸಮಯ ನಿಗದಿ ಮಾಡಲಾಗಿದೆ.