alex Certify ವಾಹನ ಸವಾರರೇ ಇತ್ತ ಗಮನಿಸಿ : ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಇತ್ತ ಗಮನಿಸಿ : ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ವಿಸ್ತರಣೆ

ಮಡಿಕೇರಿ : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗೆ ಡಾಂಬರೀಕರಣ ಮತ್ತು ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿs ನಿಯಮಗಳು 1990) ನಿಯಮ 221ಎ(5)ರಲ್ಲಿ ದತ್ತವಾದ ಅಧಿಕಾರದಂತೆ ಮಸಗೋಡು-ಯಲಕನೂರು-ಕಣಿವೆ ರಸ್ತೆಯ 2 ಕಿ.ಮೀ. ನಿಂದ 13 ಕಿ.ಮೀ. ರವರೆಗಿನ ರಸ್ತೆಯಲ್ಲಿ ನವೆಂಬರ್, 30 ರವರೆಗೆ ಜಾರಿಯಲ್ಲಿದ್ದ ವಾಹನ ಸಂಚಾರ ನಿರ್ಬಂಧ ಆದೇಶವನ್ನು ಜನವರಿ, 01 ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

ಸಾರ್ವಜನಿಕರು ಬದಲಿ ರಸ್ತೆಯಾದ ನೇಗಳ್ಳಿ-ಕರ್ಕಳ್ಳಿ-ಕಾರೇಕೊಪ್ಪ-ಕೂಡಿಗೆ ರಸ್ತೆ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ (2)ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಅಳವಡಿಸಲು ಪೆÇಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...