ಬೆಂಗಳೂರು : ಫೆ. 17ರ ವರೆಗೆ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿತ್ತು. ಇನ್ನೂ ಭಾರಿ ಸಂಖ್ಯೆಯ ವಾಹನಗಳು ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ಹಿನ್ನಲೆಯಲ್ಲಿ ಗಡುವು ವಿಸ್ತರಿಸಲಾಗಿದೆ.
ಸಾರಿಗೆ ಇಲಾಖೆಯುವ ಮೇ 31 ರವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಲಾಗಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ವಿ.ಎಸ್. ಪುಷ್ಪಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಗಡುವು ವಿಸ್ತರಣೆ ಬಗ್ಗೆ ಸದನದಲ್ಲಿ ಮಾಹಿತಿ ನೀಡಿದ್ದರು. ಗಡುವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಆನ್‌ಲೈನ್ ಮೂಲಕ ನೋಂದಣಿ ಮಾಡಿಸಬೇಕಾಗಿದ್ದು, ಈ ಸಮಯದಲ್ಲಿ ತಾಂತ್ರಿಕ ತೊಂದರೆಗಳು ಉಂಟಾದರೆ ಅದನ್ನು ಬಗೆಹರಿಸಲು ಸಹಾಯವಾಣಿಯನ್ನು ಸಾರಿಗೆ ಇಲಾಖೆ ಆರಂಭಿಸಿದೆ.
ವಾಹನ ಮಾಲೀಕರು ಬೆಳಗ್ಗೆ 10 ರಿಂದ ಸಂಜೆ 5.30ರ ತನಕ ಸಹಾಯವಾಣಿ ಸಂಖ್ಯೆ 9449863429/26 ಸಂಖ್ಯೆಗೆ ಕರೆ ಮಾಡಬಹುದು. ವೆಬ್ ಸೈಟ್ https://transport.karnataka.gov.in?utm_source=DH-MoreFromPub&utm_medium=DH-app&utm_campaign=DH ಅಥವ www.siam.in ಗೆ ಭೇಟಿ ನೀಡಿ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಮಾಡಿಕೊಳ್ಳಬಹುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.