
ಜಬಲ್‌ಪುರ (ಮಧ್ಯಪ್ರದೇಶ): ಜಬಲ್‌ಪುರದಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಅಂಗಡಿ ಮಾಲೀಕನ ಕೈವಾಡವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಮದ್ಯದಂಗಡಿಗೆ ಬೆಂಕಿ ಹಚ್ಚಿದ್ದಾರೆ.
ಮಾರ್ಚ್ 26 ರ ಮಂಗಳವಾರ ರಾತ್ರಿ ಜಲ್ಗಾಂವ್ ಪ್ರದೇಶದ ಪಾನಗರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಶೌಚಾಲಯಕ್ಕೆ ತನ್ನ ಮನೆಯಿಂದ ಹೊರ ಹೋಗಿದ್ದಳು. ಆದರೆ ಅವಳು ಹಿಂತಿರುಗಲಿಲ್ಲವಾದ್ದರಿಂದ ಆತಂಕಗೊಂಡ ಸ್ಥಳೀಯರು ಮತ್ತು ಸಂಬಂಧಿಕರು ಗಂಟೆಗಳ ಕಾಲ ಹುಡುಕಾಟ ನಡೆಸಿದಾಗ ಹೊಂಡದ ನೀರಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.
ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಕುಡಿದ ಮತ್ತಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಆಕ್ರೋಶಗೊಂಡ ಗ್ರಾಮಸ್ಥರು ಸಮೀಪದ ಮದ್ಯದಂಗಡಿ ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಅಲ್ಲಿದ್ದ ನೌಕರರು ಸುರಕ್ಷತೆಗಾಗಿ ಪಲಾಯನ ಮಾಡಿದ್ದಾರೆ.
ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಪನಗರ ಪೊಲೀಸ್ ಠಾಣೆಯ ಉಸ್ತುವಾರಿ ಅಜಯ್ ಬಹದ್ದೂರ್ ಸಿಂಗ್ ಖಚಿತಪಡಿಸಿದ್ದಾರೆ.