ಮಧ್ಯ ಪ್ರದೇಶದ ಇಂದೋರ್ನಲ್ಲಿ ಕಾರ್ಖಾನೆ ಮೇಲೆ ದಾಳಿ ನಡೆಸಿದ ಪೊಲೀಸರು ಸುಮಾರು 20 ಲಕ್ಷ ರೂಪಾಯಿ ಮೌಲ್ಯದ 4200 ಕೆಜಿ ತೂಕದ ಕಳಪೆ ಗುಣಮಟ್ಟದ ತುಪ್ಪವನ್ನು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೂಕ್ತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಭನ್ವಾರ್ಕುವಾನ್ ಪ್ರದೇಶದಲ್ಲಿರುವ ಕಾರ್ಖಾನೆ ಮೇಲೆ ದಾಳಿ ನಡೆಸಿದ್ದಾರೆ. ಅವಧಿ ಮೀರಿದ ತುಪ್ಪದ ಬಾಟಲಿಗಳನ್ನು ಇಲ್ಲಿ ಹೊಸ ಬ್ರ್ಯಾಂಡ್ ಹೆಸರು ನೀಡಿ ಮರು ಪ್ಯಾಕಿಂಗ್ ಮಾಡಲಾಗುತ್ತಿತ್ತು.
ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಕಳಪೆ ಗುಣಮಟ್ಟದ ತುಪ್ಪವನ್ನು ಕಡಿಮೆ ಬೆಲೆಗೆ ಖರೀದಿಸಿದ್ದ ಕಾರ್ಖಾನೆ ಮಾಲೀಕರು ಇವುಗಳಿಗೆ ಹೊಸ ಬ್ರ್ಯಾಂಡ್ ಹೆಸರು ನೀಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಕಾರ್ಖಾನೆ ಮಾಲೀಕರಾದ ನರೇಂದ್ರ ಗುಪ್ತಾ ಹಾಗೂ ಮಂಜು ಅಗರ್ವಾಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.