alex Certify ಮಾನವೀಯತೆ ಮೆರೆದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್

ರಾಮನಗರ: ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ದಂಪತಿಯನ್ನು ಕಂಡು ಕಾರ್ ನಿಲ್ಲಿಸಿದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ನೂತನ ಸಂಸದ ಡಾ. ಸಿ.ಎನ್. ಮಂಜುನಾಥ್ ಗಾಯಗೊಂಡವರನ್ನು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಡಾ. ಮಂಜುನಾಥ್ ಅವರು ಕಬ್ಬಾಳಮ್ಮ ದೇವಿ ದರ್ಶನಕ್ಕೆ ತೆರಳುತ್ತಿದ್ದರು. ಕನಕಪುರ ಬಳಿ ಅಪಘಾತದಲ್ಲಿ ಗಾಯಗೊಂಡವರನ್ನು ಕಂಡ ಕೂಡಲೇ ಕಾರ್ ನಿಲ್ಲಿಸಿ ಪ್ರಥಮ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ.

ಆನೇಕಲ್ ತಾಲೂಕಿನ ದಂಪತಿ ಸಾತನೂರು ಸಮೀಪ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಅಪಘಾತ ಸಂಭವಿಸಿ ಗಾಯಗೊಂಡು ರಸ್ತೆಗೆ ಬಿದ್ದಿದ್ದಾರೆ. ಸ್ಥಳೀಯರ ನೆರವಿನಿಂದ ರಸ್ತೆ ಬದಿ ಕೂರಿಸಿದ ವೈದ್ಯರಾದ ಮಂಜುನಾಥ್ ಅವರು ಪ್ರಥಮ ಚಿಕಿತ್ಸೆ ನೀಡಿ ನಂತರ ಕನಕಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ದೇವರ ದಯೆಯಿಂದ ಅಪಘಾತದಲ್ಲಿ ದಂಪತಿಗಳಿಗೆ ಕಾಲು ಕೈಗಳಿಗೆ ಮಾತ್ರ ಗಾಯಗಳಾಗಿವೆ. ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕರೆತಂದಿದ್ದೇವೆ. ಇಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ ಎಂದು ಅವರು ತಿಳಿಸಿದ್ದು, ಡಾ. ಮಂಜುನಾಥ್ ಅವರ ಮಾನವೀಯ ಕಾರ್ಯ, ಹೃದಯವಂತಿಕೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...