ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ನಾನು ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಊಹಾಪೋಹವಷ್ಟೇ. ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆ ಇಲ್ಲ. ಪಕ್ಷ ಈ ಕುರಿತಾಗಿ ತೀರ್ಮಾನ ಮಾಡುತ್ತದೆ. ಲೋಕಸಭೆ ಚುನಾವಣೆಗೆ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ.