alex Certify ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಡಾ.ಜಿ. ಪರಮೇಶ್ವರ್ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಗೆ ಸಚಿವರ ಸ್ಪರ್ಧೆ ಬಗ್ಗೆ ಡಾ.ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಈವರೆಗೂ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ನನ್ನ ಹೆಸರು ಕೇಳಿ ಬಂದಿತ್ತು. ಈ ಬಾರಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಕೇಳಿ ಬರುತ್ತಿದೆ. ಆದರೆ, ಎಲ್ಲಿಯೂ ಸ್ಪರ್ಧಿಸಬೇಕೆಂಬ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಹೇಳಿದರೆ ಅಧಿಕೃತವಾಗುತ್ತದೆ. ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು, ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಪ್ರಮುಖ ನಾಯಕರೊಂದಿಗೆ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ,

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...