ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ಬೇಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ದೇವೇಗೌಡರು ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಆದರೆ, ನಾನು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಓರ್ವ ಯುವಕನನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಮನವಿ ಮಾಡುವ ಮೂಲಕ ಪರೋಕ್ಷವಾಗಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರನ್ನು ಗೆಲ್ಲಿಸುವಂತೆ ಕೋರಿದ್ದಾರೆ.
ವೀಲ್ ಚೇರ್ ನಲ್ಲಿ ಬಂದು ಚೆನ್ನಕೇಶವನ ದರ್ಶನ ಪಡೆದುಕೊಂಡಿದ್ದೇನೆ. ಈ ಚುನಾವಣೆ ತುಂಬಾ ವಿಭಿನ್ನವಾಗಿದೆ. ರಾಜಕೀಯ ಜೀವನದಲ್ಲಿ ಜಾತ್ಯತೀತ ತತ್ವದಡಿ ಕೆಲಸ ಮಾಡಿ ಕೊನೆಯ ಘಟ್ಟದಲ್ಲಿ ಯಾಕೆ ಬದಲಾವಣೆ ಎಂದು ಕೇಳುತ್ತಾರೆ. ಹೌದು ನಾನು ಬದಲಾವಣೆ ಮಾಡಿದ್ದೇನೆ. ಮೊಮ್ಮಗನನ್ನು ಗೆಲ್ಲಿಸಿ ಎಂದು ಬಂದಿಲ್ಲ, ಜಿಲ್ಲೆಯ ಅಭಿವೃದ್ಧಿಗಾಗಿ ಬಂದಿದ್ದೇನೆ. ದೇವೇಗೌಡರು ದೇವೇಗೌಡರ ಮಕ್ಕಳು ಯಾರಿಗೆ ಅನ್ಯಾಯ ಮಾಡಿದ್ದೇವೆ ಹೇಳಿ ಎಂದು ಪ್ರಶ್ನಿಸಿದ್ದಾರೆ.