alex Certify ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಯಲ್ಲಿ ಹಾಸನ, ಮಂಡ್ಯ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ ಇದೆ: ಪ್ರೀತಂ ಗೌಡ ವಿಶ್ವಾಸ

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿ ಪಾಲಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಂಡವಪುರದಲ್ಲಿ ಬಿಜೆಪಿ ಕಾರ್ಯಕಾರಣಿಯಲ್ಲಿ ಟಿಕೆಟ್ ಹಂಚಿಕೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಎನ್.ಡಿ.ಎ. ಮೈತ್ರಿಕೂಟ ಸೇರ್ಪಡೆಯಾಗಿದೆ. ಆದರೆ, ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ. ಹಾಸನ ಮತ್ತು ಮಂಡ್ಯ ಕ್ಷೇತ್ರಗಳು ಬಿಜೆಪಿಗೆ ಸಿಗುವ ವಿಶ್ವಾಸ ಕಾರ್ಯಕರ್ತರಲ್ಲಿದ್ದು, ಜೆಡಿಎಸ್ ಗೆ ಈ ಕ್ಷೇತ್ರಗಳನ್ನು ಬಿಟ್ಟು ಕೊಡುವುದಾದರೆ ಬಿಜೆಪಿ ಕಾರ್ಯಕರ್ತರ ಒಪ್ಪಿಗೆ ಪಡೆಯಬೇಕು ಎಂದು ಹೇಳಿದ್ದಾರೆ.

ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಬಾರದು ಎಂದು ಪಕ್ಷದ ಬಹುತೇಕ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ವಿಚಾರವನ್ನು ರಾಜ್ಯ ನಾಯಕರ ಗಮನಕ್ಕೆ ತರಲಾಗುವುದು. ರಾಜ್ಯಾಧ್ಯಕ್ಷರೊಂದಿಗೆ ಈ ಬಗ್ಗೆ ಚರ್ಚೆ ನಡೆಸುವುದಾಗಿ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.

ಈ ಹಿಂದೆ ಮಂಡ್ಯ, ಹಾಸನ ಸೇರಿ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು. ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರುವುದು ಈಗ ಒಂದು ಕ್ಷೇತ್ರದಲ್ಲಿ ಮಾತ್ರ. ಬಿಜೆಪಿ ಕೂಡ ಜೆಡಿಎಸ್ ನಷ್ಟೇ ಪ್ರಾಬಲ್ಯ ಹೊಂದಿದ್ದು, ಕಾರ್ಯಕರ್ತರು ನಮ್ಮ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...