
ನವದೆಹಲಿ: ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಭಾರಿ ಚರ್ಚೆ ನಡೆದಿದ್ದು, ಪರಿಶೀಲನೆಗೆ ಸಮಿತಿ ರಚಿಸಲಾಗಿದೆ. ಲೋಕಸಭೆಗೆ ಅವಧಿ ಪೂರ್ವ ಚುನಾವಣೆ ನಡೆಯುವ ಸಾಧ್ಯತೆ ಇದೆ. ಡಿಸೆಂಬರ್ ನಲ್ಲಿ ಲೋಕಸಭೆ ಚುನಾವಣೆ ನಡೆಯಬಹುದು ಎಂದು ಹೇಳಲಾಗಿದೆ. ಆದರೆ, ಇದನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ.
ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಅವಧಿ ಪೂರ್ವ ಲೋಕಸಭೆ ಚುನಾವಣೆ ನಡೆಸುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದೆ ಇಲ್ಲ ಎಂದು ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ತಮ್ಮ ಅವಧಿಯ ಕೊನೆಯ ದಿನದವರೆಗೂ ಜನರ ಸೇವೆ ಮಾಡಲು ಪ್ರಧಾನಿ ಮೋದಿ ಬಯಸಿದ್ದಾರೆ ಎಂದು ತಿಳಿಸಿದ್ದಾರೆ.