alex Certify BREAKING: ಟ್ಯಾಕ್ಸಿಗೆ ಹಿಂದಿನಿಂದ ಟ್ರಕ್ ಡಿಕ್ಕಿ: ಐವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಟ್ಯಾಕ್ಸಿಗೆ ಹಿಂದಿನಿಂದ ಟ್ರಕ್ ಡಿಕ್ಕಿ: ಐವರು ಸಾವು

ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಟ್ರಕ್ ಹಿಂಬದಿಯಿಂದ ಟ್ಯಾಕ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 6 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕದರಿ ಬಳಿಯ NH-39 ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರಲ್ಲಿ ಮಕ್ಕಳೂ ಸೇರಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಅಪಘಾತಕ್ಕೀಡಾದ ಟ್ಯಾಕ್ಸಿ ಉತ್ತರ ಪ್ರದೇಶದ ನೋಂದಣಿ ಸಂಖ್ಯೆ ಹೊಂದಿದೆ. ಇದು ಛತ್ತರ್‌ಪುರ ರೈಲು ನಿಲ್ದಾಣದಿಂದ ಬಾಗೇಶ್ವರ ಧಾಮ್‌ಗೆ ಹೋಗುತ್ತಿದ್ದಾಗ ಪಂಜಾಬ್ ನೋಂದಣಿ ಸಂಖ್ಯೆಯ ಟ್ರಕ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.

ಟ್ಯಾಕ್ಸಿಯಲ್ಲಿ ನಾಲ್ಕು ಪಟ್ಟು ಹೆಚ್ಚು ಪ್ರಯಾಣಿಕರಿದ್ದರು. ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಟ್ಯಾಕ್ಸಿಯಿಂದ ಗಾಯಾಳುಗಳನ್ನು ಹೊರತೆಗೆದು 108 ಆಂಬ್ಯುಲೆನ್ಸ್ ಸಹಾಯದಿಂದ ಛತ್ತರ್‌ಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಇದೇ ವೇಳೆ ಪೊಲೀಸರು ಆಗಮಿಸಿ ಮೃತದೇಹಗಳನ್ನು ಶವಾಗಾರಕ್ಕೆ ಸಾಗಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...