
ದಾವಣಗೆರೆ: ದಾವಣಗೆರೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ್ ತಮಗೆ ಜೀವ ಬೆದರಿಕೆಯಿದೆ ಎಂದು ಸ್ವತಃ ಬಹಿರಂಗಪಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ ಜಿ.ಎಂ.ಸಿದ್ದೇಶ್ವರ್, ನನಗೆ ಜೀವ ಬೆದರಿಕೆಯಿದೆ. ನನ್ನ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ. ಕಾಲು ತೆಗೆಯಬೇಕು, ವಿಷ ಹಾಕಿ ಸಾಯಿಸಬೇಕು ಎಂದು ಕೆಲವರು ಸಂಚು ರೂಪಿಸಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಇದೇ ಕಾರಣಕ್ಕೆ ಎಲ್ಲೇ ಹೋದರೂ ಎಚ್ಚರಿಕೆಯಿಂದ ಇರುತ್ತೇನೆ. ನನಗೆ ಯಾರು ಏನೇ ಕೊಟ್ಟರೂ ನಾನು ತಿನ್ನುವುದಿಲ್ಲ. ನನ್ನನ್ನು ದಾವಣಗೆರೆಯಿಂದ ತೆಗೆಯಲು ಹೊಂಚು ಹಾಕಿದ್ದಾರೆ. ಫ್ರೆಂಡ್ಸ್ ಸರ್ಕಲ್ ನಲ್ಲಿಯೇ ನನ್ನನ್ನು ತೆಗೆಯಲು ಸಂಚು ರೂಪಿಸಲಾಗಿದೆ ಎಂದು ಹೇಳಿದ್ದಾರೆ.