ಕೊಪ್ಪಳ: ಕೊಪ್ಪಳ ಬಿಜೆಪಿ ಟಿಕೆಟ್ ಸಿಗದಿರುವುದಕ್ಕೆ ಅಸಮಾಧಾನಗೊಂಡಿರುವ ಸಂಸದ ಕರಡಿ ಸಂಗಣ್ಣ ಇಂದು ಲೋಕಸಭೆ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಳಿಗ್ಗೆ 10.30 ಕ್ಕೆ ಬೆಂಬಲಿಗರ ಸಭೆ ಕರೆದಿರುವ ಕರಡಿ ಸಂಗಣ್ಣ ಸಭೆ ನಡೆಸಿದ ಬಳಿಕ ದೆಹಲಿಗೆ ತೆರಳಿ ಲೋಕಸಭೆ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಅವರು ಜೆಡಿಎಸ್ ಸೇರುವುದು ಬಹುತೇಕ ಫಿಕ್ಸ್ ಆಗಿದ್ದು, ಏಪ್ರಿಲ್ 19 ರಂದು ಜೆಡಿಎಸ್ ನಿಂದ ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.