
ಬೆಂಗಳೂರು: ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯಲ್ಲಿ ಎಂ.ಪಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿದ ಎಂ.ಪಿ. ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಬಿಜೆಪಿ ಟಿಕೆಟ್ ತಪ್ಪಲು ಸಿ.ಟಿ. ರವಿಯವರೇ ಕಾರಣ ಎಂದು ಆರೋಪಿಸಿದ್ದರು. ಈಗ ಜೆಡಿಎಸ್ ಸೇರಿರುವ ಅವರು ಮೂಡಿಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.