ಭೋಪಾಲ್: ಮಧ್ಯಪ್ರದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ದರವನ್ನು 450 ರೂ.ಗೆ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ತಿಳಿಸಿದ್ದಾರೆ.
ಮಧ್ಯಪ್ರದೇಶದ 40 ಲಕ್ಷ ಮಹಿಳೆಯರು 450 ರೂ.ಗೆ ಗ್ಯಾಸ್ ಸಿಲಿಂಡರ್ ಖರೀದಿಸಬಹುದಾಗಿದೆ. ಪ್ರಸ್ತುತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ದರ 848 ರೂಪಾಯಿ ಇದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪಿಎಂಯುವೈ ಯೋಜನೆ ಅಲ್ಲದೆ, ಲಾಡ್ಲಿ ಬೆಹನಾ ಯೋಜನೆ ಅಡಿಯಲ್ಲಿ 450 ರೂ.ಗೆ ಅಡುಗೆ ಅನಿಲ ಸಿಲಿಂಡರ್ ನೀಡಲಾಗುವುದು. ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ನೀಡಿದ್ದ ಭರವಸೆಯನ್ನು ಈಗ ಈಡೇರಿಸಿದಂತಾಗಿದೆ.
ಹೆಚ್ಚುವರಿಯಾಗಿ, ರಕ್ಷಾ ಬಂಧನದ ಸಂದರ್ಭದಲ್ಲಿ ಆಗಸ್ಟ್ 1 ರಂದು LBY ಅಡಿಯಲ್ಲಿ ಎಲ್ಲಾ ಮಹಿಳೆಯರ ಖಾತೆಗಳಿಗೆ 250 ರೂಗಳನ್ನು ವಿತರಿಸಲಾಗುತ್ತದೆ.