alex Certify ಜೈಲಿನಿಂದ ಹೊರಬಂದ ಬೆನ್ನಲ್ಲೇ ಕಾಮುಕನಿಂದ ಪೈಶಾಚಿಕ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲಿನಿಂದ ಹೊರಬಂದ ಬೆನ್ನಲ್ಲೇ ಕಾಮುಕನಿಂದ ಪೈಶಾಚಿಕ ಕೃತ್ಯ

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಗ್ರಾಮವೊಂದರಲ್ಲಿ ಕಾಮುಕನೊಬ್ಬ ಪೈಶಾಚಿಕ ಕೃತ್ಯವೆಸಗಿದ್ದಾನೆ. ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿದ್ದ ಆರೋಪಿ 10 ದಿನಗಳ ಹಿಂದೆ ಹೊರಬಂದಿದ್ದು, 5 ವರ್ಷದ ಬಾಲಕಿಯನ್ನು ಅಪಹರಿಸಿ ಹೊಲದಲ್ಲಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ.

ಸಬಲ್ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಂಟಿ ರಾಜಕ್(36) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. 5 ವರ್ಷದ ಬಾಲಕಿ ಗುರುವಾರ ಸಂಜೆ ನಾಪತ್ತೆಯಾಗಿದ್ದು, ಕುಟುಂಬ ಸದಸ್ಯರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ನಂತರ ಊರಿನ ಹೊರವಲಯದ ಹೊಲದಲ್ಲಿ ರಕ್ತದ ಮಡುವಿನಲ್ಲಿ ಬಾಲಕಿ ಬಿದ್ದಿರುವುದು ಕಂಡುಬಂದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಟಿ ರಾಜಕ್ ನನ್ನ  ಬಂಧಿಸಿದ್ದು, ಆತ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಸಂಬಂಧಿತ ವಿಭಾಗಗಳು ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಿಸಿ ಆತನನ್ನು ಬಂಧಿಸಲಾಗಿದೆ ಎಂದು ಸಬಲ್ಗಢ ಠಾಣೆ ಉಸ್ತುವಾರಿ ನರೇಂದ್ರ ಶರ್ಮಾ ತಿಳಿಸಿದ್ದಾರೆ. ಮೃತ ಬಾಲಕಿಯ ಚಿಕ್ಕಮ್ಮನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರು ತಿಂಗಳು ಜೈಲುವಾಸ ಅನುಭವಿಸಿ 10 ದಿನಗಳ ಹಿಂದೆ ಬಿಡುಗಡೆಯಾಗಿದ್ದ. ಜೈಲಿಂದ ಬಂದವ ಇಂತಹ ಕೃತ್ಯವೆಸಗಿ ಮತ್ತೆ ಜೈಲು ಸೇರಿದ್ದಾನೆ. ಆಕ್ರೋಶಗೊಂಡ ಗ್ರಾಮಸ್ಥರು ಆತನ ಮನೆ ಮೇಲೆ ದಾಳಿಗೆ ಯತ್ನಿಸಿದ್ದು, ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...