
ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಲಾಗಿದೆ.
ಹೊನ್ನಾಳಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ದುಷ್ಕರ್ಮಿಗಳು ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ.
ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಪ್ರಜ್ವಲ್ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ರೇಣುಕಾಚಾರ್ಯ ಆರೋಗ್ಯ ವಿಚಾರಿಸಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಹೊನ್ನಾಳಿ ಠಾಣೆ ಪೊಲೀಸರಿಗೆ ಸೂಚಿಸಿದ್ದಾರೆ.