
ದಾವಣಗೆರೆ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು ಪಕ್ಷದ ಹಿರಿಯ ಸಚಿವರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.
ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ ಎಂದು ಪ್ರಶ್ನಿಸಿದ್ದಾರೆ. ನಮ್ಮ ಸರ್ಕಾರ ಬಂದಾಗಲೆಲ್ಲಾ ಅವರಿಗೆ ಮಂತ್ರಿಸ್ಥಾನ ನೀಡುತ್ತಿದ್ದಾರೆ. ಪಕ್ಷದಲ್ಲಿ ಅವರಷ್ಟೇನಾ ಇರೋದು? ಬೇರೆಯವರು ಇಲ್ವಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ನನಗೂ ಸಚಿವ ಸ್ಥಾನ ಕೊಡಿ ಎಂದು ವರಿಷ್ಠರಿಗೆ ಕೇಳಿದ್ದೇನೆ. ಹೊಸ ಮುಖಗಳಿಗೆ ಅವಕಾಶ ನೀಡುವಂತೆ ಕೇಳಿದ್ದೇನೆ ಎಂದು ಹೊನ್ನಾಳಿಯಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.