
ದಾವಣಗೆರೆ: ಯಾರೂ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕರೆ ನೀಡಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ಜನರು ಯಾರೂ ಕೂಡ ಕರೆಂಟ್ ಬಿಲ್ ಕಟ್ಟಬೇಡಿ. ಯಾರಾದರೂ ಕರೆಂಟ್ ಬಿಲ್ ಕೇಳಿದರೆ ನನಗೆ ಕರೆ ಮಾಡಿ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ಸೋಮವಾರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಭರವಸೆ ಈಡೇರಿಸಿಲ್ಲ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸಿದ ಅವರು, ಜನ ಕರೆಂಟ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ್ದಾರೆ.