ದಾವಣಗೆರೆ: ವಿದ್ಯುತ್ ದರ ಏರಿಕೆಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಯಾರೂ ಕೂಡ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ್ದಾರೆ.
20,000 ಕೋಟಿ ರೂ. ಕಾಮಗಾರಿ ಹಣ ವಾಪಸ್ ಪಡೆದಿದ್ದಾರೆ. ನಮ್ಮ ಅವಧಿಯ ಕಾಮಗಾರಿ ಹಣ ವಾಪಸ್ ಪಡೆಯಲು ಆಗುತ್ತದೆ, ವಿದ್ಯುತ್ ಬೆಲೆ ಏರಿಕೆ ಆದೇಶ ವಾಪಸ್ ಪಡೆಯಲು ಬರುವುದಿಲ್ಲವೆ ಎಂದು ಪ್ರಶ್ನಿಸಿದ್ದಾರೆ.
ಅಧಿಕಾರಕ್ಕೆ ಬರಲ್ಲ ಎಂದು ಗ್ಯಾರಂಟಿ ಯೋಜನೆ ಘೋಷಿಸಿದ್ದರು. ಅದೃಷ್ಟ ಚೆನ್ನಾಗಿತ್ತು ಅಧಿಕಾರಕ್ಕೆ ಬಂದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಸೂಪರ್ ಸಿಎಂ ರೀತಿ ಮಾಡುತ್ತಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ದಿನಕ್ಕೊಂದು ಹೇಳಿಕೆ ನೀಡುತ್ತಾ ಹೋಗುತ್ತಿದ್ದಾರೆ. ವಿದ್ಯುತ್ ದರ ಏರಿಕೆ ಮಾಡಿ ಬಡವರಿಗೆ ಹೊರೆ ಮಾಡಿದ್ದಾರೆ. ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಆದರೆ, ಹಳ್ಳಿಗಳಲ್ಲಿ ಬಸ್ಸೇ ಇಲ್ಲ ಎಂದು ರೇಣುಕಾಚಾರ್ಯ ಟೀಕಿಸಿದ್ದಾರೆ.