
ದಾವಣಗೆರೆ: ತೊಟ್ಟಿಲು ಶಾಸ್ತ್ರ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 60 ಜನ ಅಸ್ವಸ್ಥರಾದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಡೆದಿದೆ.
ಅಸ್ವಸ್ಥಗೊಂಡವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಾಸಕ ಎಂ.ಪಿ. ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿರುವ ಎಂ.ಪಿ. ರೇಣುಕಾಚಾರ್ಯ ಸೋದರನ ಮಗನ ಸಾವಿನ ದುಃಖದ ನಡುವೆಯೂ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ಜನರ ಯೋಗ ಕ್ಷೇಮ ವಿಚಾರಿಸಿದ್ದಾರೆ.