alex Certify ಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ ಅರ್ಜಿ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯ ಮೀರಿ ಆಸ್ತಿ ಗಳಿಕೆ; ಬಿಜೆಪಿ ಶಾಸಕ ರೇಣುಕಾಚಾರ್ಯಗೆ ಬಿಗ್ ಶಾಕ್: ಪ್ರಕರಣ ರದ್ದು ಕೋರಿದ ಅರ್ಜಿ ವಜಾ

ಬೆಂಗಳೂರು: ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ

2015ರಲ್ಲಿ ಗುರುಪಾದಯ್ಯ ಮಠದ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು. ಎಫ್ಐಆರ್ ದಾಖಲಿಸಿದ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು. ತನಿಖೆ ಮುಕ್ತಾಯವಾಗಿ ಅಂತಿಮ ವರದಿ ಸಿದ್ಧವಾಗಿದೆ. ಸಕ್ಷಮ ಪ್ರಾಧಿಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಲೋಕಾಯುಕ್ತ ಪರ ವಕೀಲ ಬಿ.ಎಸ್. ಪ್ರಸಾದ್ ವಾದ ಮಂಡಿಸಿದ್ದಾರೆ. ನ್ಯಾ. ಕೆ. ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪ್ರಕರಣ ರದ್ದು ಕೋರಿದ ಎಂ.ಪಿ. ರೇಣುಕಾಚಾರ್ಯ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...