ಭೋಪಾಲ್: ಮಧ್ಯಪ್ರದೇಶ ಸರ್ಕಾರ ಹಸುಗಳ ರಕ್ಷಣೆಗಾಗಿ ಪ್ರತ್ಯೇಕ ಗೋ ಸಚಿವಾಲಯ ರಚಿಸಲು ತೀರ್ಮಾನಿಸಿದೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿ ಹಸುಗಳ ರಕ್ಷಣೆಗಾಗಿ ಹಸುಗಳ ಸಚಿವಾಲಯ ರಚಿಸಲಾಗುವುದು. ಪಶುಸಂಗೋಪನೆ, ಅರಣ್ಯ, ಪಂಚಾಯತ್, ಗ್ರಾಮೀಣಾಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಗೋ ಸಚಿವಾಲಯದ ಭಾಗವಾಗಿ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
ಸಚಿವಾಲಯದ ಮೊದಲ ಸಭೆ ನವೆಂಬರ್ 22 ರಂದು ನಡೆಯಲಿದೆ. ಶಿವರಾಜ್ ಸಿಂಗ್ ಚೌಹಾಣ್ 2 ವರ್ಷಗಳ ಹಿಂದೆ ಹಸುಗಳಿಗೆ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ದರು. ಮಧ್ಯಪ್ರದೇಶದಲ್ಲಿ ಗೋ ಪಾಲನೆಗೆ ಪ್ರತ್ಯೇಕ ಪ್ರಾಧಿಕಾರ ಅಸ್ತಿತ್ವದಲ್ಲಿದ್ದು ಈಗ ಪ್ರತ್ಯೇಕ ಸಚಿವಾಲಯ ರಚಿಸಲಾಗುವುದು ಎಂದು ಹೇಳಲಾಗಿದೆ.